ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಏಕವಚನದಲ್ಲಿ ನಾಲಿಗೆ ಹರಿಬಿಟ್ಟಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಬಿ ತಿಮ್ಮಾಪುರ, ರಾಷ್ಟ್ರೀಯ ಪಕ್ಷಗಳು ಈಸ್ಟ್ ಇಂಡಿಯಾ ಕಂಪನಿ ತರ ಎಂಬ ಎಚ್ಡಿಕೆ ಹೇಳಿಕೆಗೆ ಗರಂ ಆಗಿದ್ದಾರೆ. ಅವನು ಎನ್ ಕಂಡು ಹಿಡಿದಿದ್ದಾನೆ ಜನತೆಗೆ ಹೇಳಲಿ, ಅದು ಅವನ ಅಭಿಪ್ರಾಯ ಎಂದು ಹೇಳುವ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ. ಇಂಡಿಯಾ ಅದು ಈಸ್ಟ್ ಇಂಡಿಯಾ ಕಂಪನಿ ಹೇಗಾಗುತ್ತೆ ಅವರು ಹೇಳಲಿ ಎಂದು ಕಡೆಗೆ ಸುಧಾರಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.

Author: Karnataka Files
Post Views: 1





