Download Our App

Follow us

Home » ಭಾರತ » ತೆನೆ ಇಳಿಸಿ ಕೈ ಪಡೆ ಸೇರಿದ ಆಯನೂರು

ತೆನೆ ಇಳಿಸಿ ಕೈ ಪಡೆ ಸೇರಿದ ಆಯನೂರು

ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪಕ್ಷ ತ್ಯಜಿಸಿ ಜೆಡಿಎಸ್ ಸೇರಿದ್ದ  ಶಿವಮೊಗ್ಗದ ಆಯನೂರು ಮಂಜುನಾಥ ಇದೀಗ ಜೆಡಿಎಸ್ ಗೆ ರಾಜೀನಾಮೆ ನೀಡಿ ಕಾಂಗ್ರೇಸ್ ಪಕ್ಷ ಸೇರಿದ್ದಾರೆ. ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಎರಡು ಪಕ್ಷಗಳನ್ನು ಬದಲಾಯಿಸಿದ್ದಾರೆ. ಕಾಂಗ್ರೇಸ್ ಸೇರಿದ ಆಯನೂರು ಮಂಜುನಾಥರನ್ನು ಕೆ ಪಿ ಸಿ ಸಿ ಅಧ್ಯಕ್ಷ ಹಾಗು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಸ್ವಾಗತಿಸಿದರು. ಅಪಾರ ಬೆಂಬಲಿಗರೊಂದಿಗೆ ಆಯನೂರು ಕಾಂಗ್ರೇಸ್ ಸೇರಿದರು. ಇದು ನನ್ನ ರಾಜಕೀಯ ಜೀವನದ ಲಾಸ್ಟ್ ಸ್ಟಾಪ್ ಎಂದ ಮಂಜುನಾಥ, ಪಕ್ಷ ನೀಡುವ ಜವಾಬ್ದಾರಿಯನ್ನು ಪಾಲಿಸುವದಾಗಿ ಹೇಳಿದರು. ಆಯನೂರು ಮಂಜುನಾಥ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!