ಕೃಷಿ ಮೇಳದಲ್ಲಿ ಭಾಗವಹಿಸಲು ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನು ಯಾವದೇ ಕಾರಣಕ್ಕೂ ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಎಚ್ ವಿಶ್ವನಾಥ ಹಾಗೂ ರೇವಣ್ಣ, ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಅರ್ಹ ವ್ಯಕ್ತಿ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅಷ್ಟೇ. ಪ್ರಜಾಪ್ರಭುತ್ವದಲ್ಲಿ ಯಾರ ಬೇಕಾದರು, ಎನ್ ಬೇಕಾದರು ಆಗಬಹುದು. ಆದರೆ ರಾಷ್ಟ್ರ ರಾಜಕಾರಣಕ್ಕೆ ನಾನು ಹೋಗಲ್ಲ ಎಂದು ಸ್ಪಷ್ಟಪಡಿಸಿದರು . ಪ್ರಧಾನಮಂತ್ರಿಗಳಿಗೆ ವಿಷಯಾಧಾರಿತವಾಗಿ ಟೀಕೆ ಮಾಡ್ತೇನೆ ಹೊರತು, ಸುಖಾ ಸುಮ್ಮನೆ ಟೀಕೆ ಮಾಡಿಲ್ಲ ಎಂದು ಹೇಳಿದರು. ಜಿ 20 ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳು ಔತಣ ಕೂಟಕ್ಕೆ ಆಹ್ವಾನಿಸಿದ್ದಾರೆ. ನಾನು ಔತಣ ಕೂಟಕ್ಕೂ ಹೋಗ್ತಿಲ್ಲ ಎಂದು ತಿಳಿಸಿದರು.
Author: Karnataka Files
Post Views: 11





