ರಾಜ್ಯಾದ್ಯಂತ ಕಳೆದ ಕೆಲವು ದಿನಗಳಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಧಾರವಾಡ ಜಿಲ್ಲೆಯಲ್ಲಿ 155 ಡೆಂಘಿ ಪ್ರಕರಣಗಳು ಇವೆ.
ಡೆಂಘಿ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಬೆಂಗಳೂರು ನಗರ ಸೇರಿದಂತೆ ಎಲ್ಲ ಜಿಲ್ಲೆಗಳ ಆದೇಶ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಸಂಗ್ರಹಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಛಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.
Author: Karnataka Files
Post Views: 4





