ರಾಜ್ಯದಲ್ಲಿ ಪರಿಸ್ಥಿತಿ ಸರಿಯಿಲ್ಲ ಎಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ರಾತ್ರಿ ವೇಳೆ ಹಿಂದೂಗಳು ಓಡಾಡದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ. ಯತ್ನಾಳ ಕಾಂಗ್ರೇಸ್ ಸರ್ಕಾರದ ಮೇಲೆ ನಿರಂತರವಾಗಿ ಛಾಟಿ ಬೀಸುತ್ತಿದ್ದಾರೆ. ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಇದೆ ಎಂದಿರುವ ಅವರು ಮೈಸೂರು ಹಾಗೂ ಶಿವಮೊಗ್ಗದಲ್ಲಿ ಗಲಭೆಯಾಗಿವೆ ಎಂದಿದ್ದಾರೆ. ಭಯ ಪಡುವ ಅವಶ್ಯಕತೆ ಇಲ್ಲ ಎಂದಿರುವ ಬಸನಗೌಡ ಪಾಟೀಲ್ ಯತ್ನಾಳ, 6 ತಿಂಗಳಲ್ಲಿ ಸರ್ಕಾರ ಬದಲಾಗಲಿದೆ ಎಂದು ಮತ್ತೆ ಹೇಳಿಕೆ ಕೊಟ್ಟಿದ್ದಾರೆ.
Author: Karnataka Files
Post Views: 2





