ರಾಜ್ಯ ಸರ್ಕಾರದ ಮಹತ್ವದ ಕಾರ್ಯಕ್ರಮ ಜನತಾ ದರ್ಶನ ಕಾರ್ಯಕ್ರಮ ನಾಳೆ ಧಾರವಾಡದಲ್ಲಿ ನಡೆಯಲಿದೆ. ಧಾರವಾಡದ ಕೆ ಸಿ ಡಿ ಕಾಲೇಜು ಆವರಣದಲ್ಲಿರುವ ಸೃಜನಾ ರಂಗ ಮಂದಿರದಲ್ಲಿ ಬೆಳಿಗ್ಗೆ 11 ಘಂಟೆಗೆ ಜನತಾ ದರ್ಶನ ಆರಂಭವಾಗಲಿದೆ.
ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಜನರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಜನತಾ ದರ್ಶನದಲ್ಲಿ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ತುರ್ತು ಪ್ರಕರಣಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ.
Author: Karnataka Files
Post Views: 2





