ರಾಜಧಾನಿ ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಾಜಿ ಕಾಂಗ್ರೆಸ್ ಮುಖಂಡರೊಬ್ಬರ ಮನೆ ಮೇಲೆ ಗುರುವಾರ ತಡರಾತ್ರಿ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಐಟಿ ಇಲಾಖೆ ತಂಡಕ್ಕೆ ಸಿಕ್ಕಿದ್ದನ್ನು ನೋಡಿ ಅವರೇ ಬೆಚ್ಚಿಬಿದ್ದಿದ್ದಾರೆ. ಮಾಹಿತಿ ಪ್ರಕಾರ, ಬೆಂಗಳೂರಿನ ಆರ್ಟಿ ನಗರ ಪ್ರದೇಶದಲ್ಲಿ ಗುರುವಾರ ತಡರಾತ್ರಿ ದಾಳಿ ನಡೆದಿದೆ. ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಅಶ್ವಥಮ್ಮ ಹಾಗೂ ಅವರ ಸಂಬಂಧಿಕರೊಬ್ಬರ ಮನೆ ಮೇಲೆ ದಾಳಿ ನಡೆದಿದೆ. ಐಟಿ ತಂಡ ಇಲ್ಲಿಗೆ ತಲುಪಿದಾಗ ಸಂಬಂಧಿಕರ ಮನೆಯಿಂದ ರಟ್ಟಿನ ಪೆಟ್ಟಿಗೆಯೊಳಗೆ ಹಲವು ನೋಟುಗಳ ಬಂಡಲ್ಗಳು ಪತ್ತೆಯಾಗಿವೆ. ಇವುಗಳನ್ನು ನೋಡಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೂ ಬೆಚ್ಚಿ ಬಿದ್ದಿದ್ದಾರೆ. ಸದ್ಯ ದಾಳಿ ಇನ್ನೂ ಮುಂದುವರಿದಿದೆ. ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಗುರುವಾರ ಆದಾಯ ತೆರಿಗೆ ಇಲಾಖೆ ಬೆಂಗಳೂರಿನ ಹಲವೆಡೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ.

ದಾಳಿ ವೇಳೆ ಮಂಚದ ಕೆಳಗೆ ಬಾಕ್ಸ್ ನಲ್ಲಿ ಇಟ್ಟಿದ್ದ 42 ಕೋಟಿ ರೂಪಾಯಿ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಮನೆಯಲ್ಲಿ ಇನ್ನು ತಪಾಸನೆ ನಡೆಸಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ದೊಡ್ಡ ಭೇಟೆಯಾಡಿದ್ದಾರೆ. 23 ಬಾಕ್ಸ್ ನಲ್ಲಿ 500 ರೂಪಾಯಿ ಮುಖಬೆಲೆಯ ನೋಟುಗಳನ್ನು ತೆಗೆದಿಟ್ಟಿದ್ದರು ಎನ್ನಲಾಗಿದೆ.





