ಕಳೆದ ವಾರ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೊಮ್ಮಾಯಿಯವರ ಆರೋಗ್ಯ ವಿಚಾರಿಸಿದರು. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಪೂರ್ಟಿಸ್ ಆಸ್ಪತ್ರೆಯಲ್ಲಿ ಬೊಮ್ಮಾಯಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಬೊಮ್ಮಾಯಿಯವರರಿಗೆ ಸಿದ್ದರಾಮಯ್ಯನವರು ಸಲಹೆ ನೀಡಿದರು. ನಂತರ ಸಿದ್ದರಾಮಯ್ಯನವರು ಆಸ್ಪತ್ರೆ ವೈಧ್ಯರ ಜೊತೆ ಮಾತನಾಡಿ ಬೊಮ್ಮಾಯಿಯವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಗೃಹಸಚಿವ ಜಿ ಪರಮೇಶ್ವರ ಸಿದ್ದರಾಮಯ್ಯನವರ ಜೊತೆ ಆಸ್ಪತ್ರೆಗೆ ತೆರಳಿದ್ದರು.
Author: Karnataka Files
Post Views: 3





