ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಗ್ರಾಮದಲ್ಲಿ ಸೋಮವಾರ ಶಾರ್ಟ್‌ನಿಂದ ಬೆಂಕಿ ಹೊತ್ತಿಕೊಂಡು ಸುಮಾರು 30 ಎಕರೆ ಹೊಲದಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಕರಕಲಾಗಿದೆ. ಕಬ್ಬಿನ ಹೊಲದಲ್ಲಿ ಇದ್ದ ನೀರಿನ ಮೋಟಾರು, ಪೈಪುಗಳು, ಕೇಬಲ್, ಕರೆಂಟ್ ಬಾಕ್ಸ್ಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕಿಟನಿಂದ ಈ ಅಗ್ನಿ ಅವಘಡ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಆಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದರು.
Author: Karnataka Files
Post Views: 1





