ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿಗೆ ಒಂದರ ಮೇಲೊಂದರಂತೆ ಹೊಡೆತ ಕೊಡುತ್ತಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರಿಗೆ ಕಾಂಗ್ರೇಸ್ ಹೈಕಮಾಂಡ ಮಹತ್ವದ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದೆ. ಬಿಜೆಪಿ ತೊರೆದು ಬಂದ ಮೇಲೆ ಜಗದೀಶ ಶೆಟ್ಟರ ಕಾಂಗ್ರೇಸ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ.
ಈಗಾಗಲೇ ಬಿಜೆಪಿಯ ಮಾಜಿ ಶಾಸಕರನ್ನು ಕಾಂಗ್ರೇಸ್ಸಿಗೆ ಕರೆತಂದ ಶೆಟ್ಟರ ಅವರನ್ನು, ಕೆ ಪಿ ಸಿ ಸಿ ರಾಜ್ಯ ಘಟಕದ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಈ ಕುರಿತಂತೆ ರಾಜ್ಯ ಕಾಂಗ್ರೇಸ್ ಉಸ್ತುವಾರಿ ಸುರ್ಜೆವಾಲಾ ಜೊತೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ ಎನ್ನಲಾಗಿದ್ದು, ಶೀಘ್ರದಲ್ಲಿಯೆ ಶೆಟ್ಟರ ಅವರು ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ ಎಂದು ಕಾಂಗ್ರೇಸ್ ಮೂಲಗಳು ತಿಳಿಸಿವೆ. ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಸಚಿವರಾಗಿರುವ ಎಮ್ ಬಿ ಪಾಟೀಲ್ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು.
Author: Karnataka Files
Post Views: 6





