ಧಾರವಾಡ ಉಪನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ದಯಾನಂದ ಶೇಗುಣಸಿ ಅವರ ಬ್ಯಾಂಕ್ ಖಾತೆಯಲ್ಲಿದ್ದ ₹8.25 ಲಕ್ಷ, ಅವರ ಗಮನಕ್ಕೆ ಬರದೆ ಆನ್‌ಲೈನ್‌ಲ್ಲಿ ವರ್ಗಾವಣೆಗೆ ಸಂಬಂಧಿಸಿದಂತೆ ಹುಬ್ಬಳ್ಳಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ಸಪೆಕ್ಟರ ದಯಾನಂದ, ಯಾರ ಜೊತೆಯೂ ಮಾಹಿತಿ ಹಂಚಿಕೊಳ್ಳದಿದ್ದರೂ ಸಹ ಹಣ ವರ್ಗಾವಣೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಬ್ಯಾಂಕ್‌ನವರು ಸುರಕ್ಷಿತ ಇರುವ ಭದ್ರತೆ ಬಗ್ಗೆ ಹೊಂದಿದ ನಿಷ್ಕಾಳಜಿಯಿಂದ ಅಥವಾ ಯಾವುದೋ ಅಧಿಕಾರಿಯ ಹಸ್ತಕ್ಷೇಪದಿಂದ ಅಪರಿಚಿತ ವ್ಯಕ್ತಿ ಹಣ ವರ್ಗಾಯಿಸಿಕೊಂಡಿದ್ದಾನೆ ಅನ್ನೋ ಅನುಮಾನ ಮೂಡಿದೆ. ಬ್ಯಾಂಕ್ ಖಾತೆಗೆ ಲಿಂಕ್ ಇರುವ ಮೊಬೈಲ್ ಸ್ವಿಚ್ಡ್ ಆಫ್ ಆಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಇಂಟರ್‌ನೆಟ್ ಬ್ಯಾಂಕಿಂಗ್ ಮೂಲಕ 50 ಸಾವಿರದಂತೆ 12 ಬಾರಿ, 45 ಸಾವಿರ ಮೂರು ಬಾರಿ, 25ಸಾವಿರ ಎರಡು ಬಾರಿ ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.
Author: Karnataka Files
Post Views: 2





