ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು, ಕಾಶ್ಮೀರದಲ್ಲಿ ಹುತಾತ್ಮರಾದ ರಾಜ್ಯದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಮೃತ ಯೋಧನಿಗೆ ಗೌರವ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಪ್ರಾಂಜಲ್ ಅವರ ದೇಶಸೇವೆ, ಸಮರ್ಪಣೆ ಚಿರಸ್ಮರಣೀಯ. ಮನೆಗೆ ಆಧಾರವಾಗಿರುವ ಪ್ರಾಂಜಲ್ರನ್ನು ಕಳೆದುಕೊಂಡು ಕುಟುಂಬಸ್ಥರು ಸಂಕಷ್ಟದಲ್ಲಿದ್ದಾರೆ, ಮೃತ ಯೋಧನ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ರಾಜ್ಯಪಾಲರು, ಬಿಜೆಪಿ ರಾಜ್ಯಾಧ್ಯಕ್ಷ ಸೇರಿದಂತೆ ಅನೇಕ ಮಂತ್ರಿಗಳು, ಮೃತ ಯೋಧನ ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು.
Author: Karnataka Files
Post Views: 100





