ಕನ್ನಡ ಚಲನಚಿತ್ರ ರಂಗದ ಹಿರಿಯ ಕೊಂಡಿಯಂತಿದ್ದ ಪ್ರಖ್ಯಾತ ನಟಿ ಲೀಲಾವತಿ ಇಂದು ವಿಧಿವಶರಾಗಿದ್ದಾರೆ. ಐವತ್ತು ವರ್ಷಗಳ ಕಾಲ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದ ಲೀಲಾವತಿ ಸುಮಾರು 600 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಸಾಮಾಜಿಕ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಲೀಲಾವತಿ ಅವರಿಗೆ 86 ವರ್ಷ ವಯಸ್ಸಾಗಿತ್ತು. ಡಾ, ರಾಜ್ಕುಮಾರ್, ವಿಷ್ಣುವರ್ಧನ್ ಮುಂತಾದ ನಟರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದರು.
ಲೀಲಾವತಿ ಅವರ ನಿಧನಕ್ಕೆ ಅಭಿಮಾನಿಗಳು, ನಟ ನಟಿಯರು, ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ಪುತ್ರ ವಿನೋದ ರಾಜ ಜೊತೆ ಕೃಷಿ ಕಾಯಕದಲ್ಲಿ ತೊಡಗಿದ್ದ ಲೀಲಾವತಿ ಅವರು, ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚಿಗಷ್ಟೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಲೀಲಾವತಿಯವರ ಹೆಸರಲ್ಲಿ ಪಶು ಆಸ್ಪತ್ರೆ ಉದ್ಘಾಟನೆ ಮಾಡಿದ್ದರು.
Author: Karnataka Files
Post Views: 1





