ರಾಷ್ಟ್ರದ ಮಾಜಿ ಪ್ರಧಾನಿ ಎಚ್ ಡಿ ದೇವಗೌಡರು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಲೋಕಸಭಾ ಸಮರಕ್ಕೆ ಅಣಿಯಾಗಿರುವ ದೇವೇಗೌಡರು ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಸೀಟು ಹಂಚಿಕೆ ವಿಷಯವಾಗಿ ಉಭಯ ನಾಯಕರ ಮಧ್ಯೆ ಮಾತುಕತೆ ನಡೆದಿದೆ.

ಅವರು ಭೇಟಿಯಾಗಲು ಬಂದ ಜೆಡಿಎಸ್ ವರಿಷ್ಟ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಆತ್ಮೀಯವಾಗಿ ಬರಮಾಡಿಕೊಂಡರು ಪ್ರಧಾನಿ ನರೇಂದ್ರ ಮೋದಿ, ದೇವೇಗೌಡರನ್ನು ಕುಳ್ಳರಿಸಿ ಮಾಜಿ ಮುಖ್ಯಮಂತ್ರಿ ಡಿ ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಎಚ್ ಡಿ ರೇವಣ್ಣರ ಜೊತೆ ಫೋಟೋ ತೆಗೆಸಿಕೊಂಡರು.

ಲೋಕಸಭೆಯಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್ 6 ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದ್ದು, ಹಾಸನ, ತುಮಕೂರು, ಮೈಸೂರು ಕೊಡಗು, ಚಾಮರಾಜನಗರ, ಮಂಡ್ಯ ಹಾಗೂ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗಿದೆ.
ಎಚ್ ಡಿ ದೇವೇಗೌಡರ ಬಗ್ಗೆ ಕೊಂಡಾಡಿರುವ ಪ್ರಧಾನಿ ಮೋದಿ, ರಾಷ್ಟ್ರದ ಪ್ರಗತಿಗೆ ದೇವೇಗೌಡರ ಅನುಕರಣೀಯ ಕೊಡುಗೆಯನ್ನು ಭಾರತವು ಬಹಳವಾಗಿ ಗೌರವಿಸುತ್ತದೆ. ನೀತಿ ವಿಷಯಗಳ ಕುರಿತು ಅವರ ಆಲೋಚನೆಗಳು ಒಳನೋಟವುಳ್ಳವು ಮತ್ತು ಭವಿಷ್ಯದ ಯೋಜನೆ ಎಂದು ಎಕ್ಸ್ ನಲ್ಲಿ ಬರೆದಿದ್ದಾರೆ.





