Download Our App

Follow us

Home » ಭಾರತ » ಕೊರೋನಾ ಉಪತಳಿ ಬಗ್ಗೆ ಮಾಹಿತಿ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊರೋನಾ ಉಪತಳಿ ಬಗ್ಗೆ ಮಾಹಿತಿ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರು ಉನ್ನತ ಮಟ್ಟದ ಸಭೆ ನಡೆಸಿದರು. ಕೋವಿಡ್ ನಿರ್ವಹಣೆಗೆ ಸರ್ಕಾರದ ಬಳಿ ಸಾಕಷ್ಟು ಹಣ ಇದೆ. ಹಣಕಾಸಿಗೆ ಕೊರತೆ ಇಲ್ಲ. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆಯಾಗದಂತೆ ಆಸ್ಪತ್ರೆಗಳು ಸಜ್ಜಾಗಬೇಕು ಎಂದರು. 

ಈಗಿನ ಉಪತಳಿ JN.1 ಒಮಿಕ್ರಾನ್ ಉಪತಳಿ ಆಗಿದೆ. ಇದು ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಜನರಲ್ಲಿ ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಜನರಲ್ಲಿ ಪತ್ತೆಯಾಗಿದ್ದು, 20 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಮನೆಯಲ್ಲೇ ಇದ್ದಾರೆ. 20 ರಲ್ಲಿ 7 ಮಂದಿ ICU ನಲ್ಲಿದ್ದಾರೆ. ಅವರು ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಕಾರಣಕ್ಕೆ ICU ನಲ್ಲಿದ್ದಾರೆ ಎಂದರು.

ರಾಜ್ಯದಲ್ಲಿ ನಿತ್ಯ 5,000, ಬೆಂಗಳೂರಲ್ಲಿ ಸಾವಿರ ಕೊರೊನಾ ಟೆಸ್ಟ್ ನಡೆಯುತ್ತಿದೆ. ಈ ಸಂಬಂಧ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗುವುದು, ಅವರು ಸಲಹಾ ಸಮಿತಿ ಜತೆ ಸಂಪರ್ಕದಲ್ಲಿದ್ದು ನಿರಂತರ ನಿಗಾ ಇಡಲು ಸೂಚಿಸಲಾಗಿದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು, ಪೂರ್ತಿಯಾಗಿ ಜಾರಿ ಮಾಡುವಂತೆ ಹೇಳಿದ್ದೇನೆ ಎಂದರು. 

ಗಡಿ ಜಿಲ್ಲೆಗಳಲ್ಲಿ ಹೆಚ್ಚೆಚ್ಚು ಪರೀಕ್ಷೆ ಮಾಡಬೇಕು. ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಮನವಿ ಮಾಡಿದರು.

ಸದ್ಯ ರಾಜ್ಯದಲ್ಲಿ 60 ವರ್ಷ ಕೆಳಗಿನವರಿಗೆ ಮಾಸ್ಕ್ ಕಡ್ಡಾಯವಿಲ್ಲ. ಜನಸಂದಣಿಯಲ್ಲಿ ಹೋಗುವವರು ಮಾಸ್ಕ್ ಧರಿಸಿದರೆ ಒಳ್ಳೆಯದು ಎಂದು ಸಲಹೆ ನೀಡಿದರು. ಕೋವಿಡ್ ಚಿಕಿತ್ಸೆಗೆ ನಿಗದಿಪಡಿಸಲಾದ ಆಸ್ಪತ್ರೆಗಳಲ್ಲಿ ಸಕಲ ಸಿದ್ಧತೆ ಇರಲಿದೆ. ಎಲ್ಲಾ ಜಿಲ್ಲೆಗಳಲ್ಲೂ ಆಕ್ಸಿಜನ್, ಬೆಡ್, ವೆಂಟಿಲೇಟರ್ ಸೇರಿ ಕೋವಿಡ್ ಸಂಬಂಧಿತ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಲಸಿಕೆಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚಿಸಲಾಗಿದೆ. ಈಗಲೇ ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎನ್ನುವ ಸಲಹೆ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರಿಂದ ಬಂದಿದೆ ಎಂದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!