Download Our App

Follow us

Home » ಶಿಕ್ಷಣ » ಪ್ರವಾಸಕ್ಕೆ ಹೊರಟಿದ್ದ ಬಸ್‌ ಪಲ್ಟಿ – 45 ಮಕ್ಕಳು ಪ್ರಾಣಾಪಾಯದಿಂದ ಪಾರು. ನಾಲ್ವರಿಗೆ ಗಂಭೀರ ಗಾಯ

ಪ್ರವಾಸಕ್ಕೆ ಹೊರಟಿದ್ದ ಬಸ್‌ ಪಲ್ಟಿ – 45 ಮಕ್ಕಳು ಪ್ರಾಣಾಪಾಯದಿಂದ ಪಾರು. ನಾಲ್ವರಿಗೆ ಗಂಭೀರ ಗಾಯ

ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಅಲ್ಲಿಪುರ ಕ್ರಾಸ್‌ ಬಳಿ ನಡೆದಿದೆ. ಘಟನೆಯಲ್ಲಿ 45 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಾಯಗೊಂಡ ಮಕ್ಕಳನ್ನ ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಸಜ್ಜನಗುಡ್ಡದ ಸರ್ಕಾರಿ ಶಾಲೆ ಮಕ್ಕಳು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ನಾಲ್ವರನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕಳಿಸಲಾಗಿದೆ.

ಸಣ್ಣಪುಟ್ಟ ಗಾಯಗೊಂಡ ಮಕ್ಕಳನ್ನ ಸವಣೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಯಚೂರುರಿಂದ ಪ್ರವಾಸಕ್ಕೆ ಆಗಮಿಸಿದ್ದ ವೇಳೆ ಈ ದುರ್ಘಟನೆ ನಡೆದಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಪಶ್ಚಿಮ ಪದವೀಧರ ಕ್ಷೇತ್ರ : ಕಾಂಗ್ರೇಸ್ಸಿಗೆ ಕಾಂಗ್ರೇಸ್ಸಿಗರಿಂದಲೇ ಖೆಡ್ಡಾ !

ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೇಸ್ಸಿಗೆ ಸೋಲಾಗಿದೆ. ಆದರೆ ಸೋತಿದ್ದು ಮೋಹನ ಲಿಂಬಿಕಾಯಿಯವರಲ್ಲ, ಸೋತಿದ್ದು ಪಂಚಮಸಾಲಿ ಪೋಲಿಟಿಕ್ಸ್ ಎಂದು ಮಾತನಾಡಿಕೊಳ್ಳಲಾಗುತ್ತಿದೆ.  ಅಷ್ಟಕ್ಕೂ ಕಾಂಗ್ರೇಸ್ ಅಭ್ಯರ್ಥಿಗೆ ಖೆಡ್ಡಾ ತೋಡಿದವರು ಅದೇ

Live Cricket

error: Content is protected !!