ಬಿಜೆಪಿಯ ಧಾರವಾಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಯುವ ಭಾಜಪ ಮುಖಂಡ, ಜಿಲ್ಲಾ ಒಬಿಸಿ ಘಟಕದ ಅಧ್ಯಕ್ಷ ಶಿವು ಬಿಳಾರದ ತೀವ್ರ ಪೈಪೋಟಿಯೂಡ್ಡಿದ್ದಾರೆ. 2002 ರಿಂದ ಆರ್ ಎಸ್ ಎಸ್ ಕಾರ್ಯಕರ್ತರಾಗಿ ಪಕ್ಷದ ವಿವಿಧ ಹಂತಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕುರುಬ ಸಮಾಜದ ಯುವ ನಾಯಕರಾಗಿ ಬೆಳೆದಿರುವ ಶಿವು, ಕುರುಬ ಎಸ್ ಟಿ ಹೋರಾಟ ಸಮಿತಿ ಅಧ್ಯಕ್ಷರಾಗಿಯೂ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ ಶಿವು ಬಿಳಾರದ, ಈ ಸಲ ಹಿಂದುಳಿದ ವರ್ಗಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

Author: Karnataka Files
Post Views: 4





