ರಾಮಜನ್ಮ ಭೂಮಿ ಹೋರಾಟದಲ್ಲಿ ಭಾಗಿಯಾದ ಶ್ರೀಕಾಂತ್ ಪೂಜಾರ ಬಂಧನ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಟೌನ್ ಪೊಲೀಸ್ ಠಾಣೆ ಎದುರಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡುತ್ತಿದ್ದಾರೆ.
31 ವರ್ಷಗಳ ಹಳೇಯ ಕೇಸನ್ನು ಜೀವಂತವಾಗಿಟ್ಟು ಕಾಂಗ್ರೇಸ್ ಸರ್ಕಾರ ಕಿಚ್ಚು ಹಚ್ಚಿದೆ ಎಂದು ಭಾಜಪ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್ ಅಶೋಕ ಭಾಗವಹಿಸಲಿದ್ದು, ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಬಿಜೆಪಿಯವರಿಗೆ ದೊಡ್ಡ ಅಸ್ತ್ರ ಸಿಕ್ಕಂತಾಗಿದೆ.
ಸಿದ್ದರಾಮಯ್ಯ ಲುಚ್ಚಾ ಎಂದು ಘೋಷಣೆ ಕೂಗಿ ಆಕ್ರೋಶ ಹೊರ ಹಾಕ್ತಿರೋ ಹಿಂದೂ ಕಾರ್ಯಕರ್ತರು, ಸಿದ್ದ ರಾಮಯ್ಯ ಖಾನ್ ಎಂದು ಫೋಟೋ ಹಿಡಿದಿದ್ದಾರೆ. ಅಷ್ಟೆ ಅಲ್ದೆ ಮಾಜಿ ಸಿಎಂ ಜಗದೀಶ್ ಶೆಟ್ಟರ್,ಶಾಸಕ ಪ್ರಸಾದ ಅಬ್ಬಯ್ಯ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇನ್ನು ಬಿಜೆಪಿಯಿಂದ ಪ್ರತಿಭಟನೆ ಹಿನ್ನೆಲೆಯಲ್ಲಿ, ಬ್ರಾಡ್ ವೆ ರಸ್ತೆ ಸಂಪೂರ್ಣ ಬಂದ್ ಮಾಡಿದ್ದಾರೆ. ಠಾಣೆಗಳಿಗೆ ಯಾರೂ ನುಗ್ಗುದಂತೆ ವಾಹನ ಅಡ್ಡ ನಿಲ್ಲಿಸಿರೋ ಪೊಲೀಸರು. ಬ್ಯಾರಿಕೇಡ ಸುತ್ತ ಪೊಲೀಸ್ ಸರ್ಪಗಾವಲು ಹಾಕಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಕಮೀಷನರ್ ಸ್ಥಳದಲ್ಲಿ 500 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದ್ದಾರೆ.





