ಕಾಂಗ್ರೇಸ್ ಸರ್ಕಾರದಲ್ಲಿ ನಿಷ್ಟಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂದು ಧಾರವಾಡದ ಕಾಂಗ್ರೇಸ್ ಮುಖಂಡ, ಕೆ ಪಿ ಸಿ ಸಿ ಸದಸ್ಯ ಶಿವಶಂಕರ ಹಂಪಣ್ಣವರ ಕಿಡಿ ಕಾರಿದ್ದಾರೆ.
ನಾಲ್ಕು ದಶಕಗಳಿಂದ ಕಾಂಗ್ರೇಸ್ ಪಕ್ಷಕ್ಕೆ ನಿಷ್ಟೆಯಿಂದ ದುಡಿಯುತ್ತ ಬಂದಿದ್ದು, ಪಕ್ಷದ ನಾಯಕರು ನಮ್ಮಂತವರನ್ನು ನಿರ್ಲಕ್ಷ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚಿಗೆ ಸರ್ಕಾರ ನಿಗಮ ಮಂಡಳಿಗೆ ನೇಮಕ ಮಾಡಿದ್ದು, ನಿಷ್ಟಾವಂತರನ್ನು ಪರಿಗಣಿಸುವಲ್ಲಿ ನಾಯಕರು ಎಡವಿದ್ದಾರೆ.
ಮುಂಬರುವ ದಿನಗಳಲ್ಲಿ ನಿಷ್ಟಾವಂತರು ಪಕ್ಷದಿಂದ ದೂರ ಸರಿಯುವ ಪರಿಸ್ಥಿತಿ ನಿರ್ಮಾಣ ಆಗದಂತೆ ಕಾಂಗ್ರೇಸ್ ಪಕ್ಷದ ನಾಯಕರು ಎಚ್ಚರ ವಹಿಸಬೇಕು ಎಂದು ಶಿವಶಂಕರ ಹಂಪಣ್ಣವರ ತಿಳಿಸಿದ್ದಾರೆ.
Author: Karnataka Files
Post Views: 1





