ಕರ್ನಾಟಕದಲ್ಲಿ ಬಿಜೆಪಿ ಈ ಸಲ 28 ಕ್ಕೆ 28 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಹಾಲಿ ಸಂಸದರಿಗೆ ಟಿಕೇಟ್ ಸಿಗಲ್ಲ ಅನ್ನೋದು ಕೇವಲ ಉಹಾಪೋಹ ಎಂದು ತಿಳಿಸಿದರು.
ಬಿಜೆಪಿ ಈಗಾಗಲೇ 195 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಗೆಲ್ಲುವ ಮತ್ತು ಪಕ್ಷಕ್ಕೆ ನಿಷ್ಟರಾದವರಿಗೆ ಟಿಕೇಟ್ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆ ಇನ್ನು ಘೋಷಣೆಯಾಗಿಲ್ಲ, ಎಲ್ಲರ ಜೊತೆ ಸಮಾಲೋಚನೆ ನಡೆಸಿ, ಆದಷ್ಟು ಬೇಗ ಗೆಲ್ಲುವ ಅಭ್ಯರ್ಥಿಗಳಿಗೆ ಪಕ್ಷ ಟಿಕೇಟ ಘೋಷಣೆ ಮಾಡಲಿದೆ ಎಂದು ಜೋಶಿ ತಿಳಿಸಿದ್ದಾರೆ. ಇದೆ ಸಂದರ್ಭದಲ್ಲಿ ಜೋಶಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಜೊತೆ ಕೆಲ ಹೊತ್ತು ಪ್ರಸಕ್ತ ರಾಜಕೀಯ ಸ್ಥಿತಿಗಳ ಬಗ್ಗೆ ಚರ್ಚಿಸಿದರು ಎಂದು ಹೇಳಲಾಗಿದೆ.
Author: Karnataka Files
Post Views: 6





