ನಿನ್ನೆ ದೆಹಲಿಯಲ್ಲಿ ನಡೆದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಲಾಗಿದೆ. ಕಗ್ಗಂಟಾಗಿದ್ದ ಕ್ಷೇತ್ರಗಳ ಬಗ್ಗೆ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಧಾರವಾಡ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಪ್ರಲ್ಲಾದ ಜೋಶಿ ಮತ್ತೆ ಟಿಕೇಟ ಗಿಟ್ಟಿಸುವಲ್ಲಿ ಸಫಲರಾಗಿದ್ದಾರೆ. ಜೋಶಿ 5 ನೇ ಬಾರಿಗೆ ಸ್ಪರ್ಧೆ ಮಾಡಲು ಹೈಕಮಾಂಡ ಅಸ್ತು ಎಂದಿದೆ. ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಟಿಕೇಟಗಾಗಿ ಬೇಡಿಕೆ ಮಂಡಿಸಿದ್ದರು. ಶೆಟ್ಟರ ಸಹ ಪ್ರಭಲ ಅಕಾಂಕ್ಷಿಯಾಗಿದ್ದರು. ಶೆಟ್ಟರ ಅವರಿಗೆ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ವರಿಷ್ಟರು ಹೇಳಿದ್ದಾರೆ ಎನ್ನಲಾಗಿದ್ದು, ಶೆಟ್ಟರ ಅದಕ್ಕೆ ಒಪ್ಪುತ್ತಾರೋ, ಇಲ್ಲವೋ ಕಾದು ನೋಡಬೇಕಿದೆ.
Author: Karnataka Files
Post Views: 1





