Download Our App

Follow us

Home » ಭಾರತ » ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಸರ್ಕಾರದ ಜಾಹೀರಾತು ಫಲಕ ತೆರವು

ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಸರ್ಕಾರದ ಜಾಹೀರಾತು ಫಲಕ ತೆರವು

ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಘೋಷಣೆ ಮಾಡುತ್ತಿದ್ದಂತೆ, ಸರ್ಕಾರಿ ಜಾಹೀರಾತು ಫಲಕಗಳನ್ನು ಧಾರವಾಡ ಜಿಲ್ಲಾಡಳಿತ ತೆರವು ಮಾಡುತ್ತಿದೆ.

ಧಾರವಾಡ ಲೋಕಸಭಾ ಕ್ಷೇತ್ರಡ ವ್ಯಾಪ್ತಿಯಲ್ಲಿ ಹಾಕಲಾಗಿರುವ ಸರ್ಕಾರದ ಯೋಜನೆಗಳ ಜಾಹೀರಾತು ಫಲಕ ತೆರವುಗೊಳಿಸುವ ಕೆಲಸ ಒಂದೆಡೆಯಾದರೆ, ನಿಗಮ ಮಂಡಳಿಗಳ ಅಧ್ಯಕ್ಷರಿಗೆ ನೀಡಿರುವ ಸರ್ಕಾರಿ ವಾಹನಗಳನ್ನು ಜಿಲ್ಲಾಡಳಿತ ತನ್ನ ವಶಕ್ಕೆ ಪಡೆದಿದೆ.

ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ವಿನೋದ ಅಸೂಟಿ, ಹುಡಾ ಅಧ್ಯಕ್ಷ ಶಾಕೀರ ಸನದಿ, ಒಳಚರಂಡಿ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯನವರಿಗೆ ನೀಡಿದ್ದ ಸರ್ಕಾರಿ ವಾಹನಗಳನ್ನು ಜಿಲ್ಲಾಡಳಿತ ತನ್ನ ಸುಪರ್ಧಿಗೆ ಪಡೆದಿದೆ.

ಇಂದು ಸಂಜೆ 6 ಘಂಟೆಗೆ ಧಾರವಾಡ ಜಿಲ್ಲಾಧಿಕಾರಿ ಪತ್ರಿಕಾಗೋಷ್ಟಿ ನಡೆಸಲಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಂಭವವಿದೆ. ಈಗಾಗಲೇ ಚೆಕ್ ಪೋಸ್ಟ್ ಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ ಗ್ರಾಮೀಣ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ತಯಾರಿ : ಹೊಸ ಮುಖಕ್ಕೆ ಮಣೆ : ಅಚ್ಚರಿ ಅಭ್ಯರ್ಥಿ ಕಣಕ್ಕೆ

ಧಾರವಾಡ ಗ್ರಾಮೀಣ ಶಾಸಕರಾಗಿದ್ದ ವಿನಯ ಕರ್ಣಿಯವರಿಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗುವಂತೆ, ಇತ್ತ ಬಿಜೆಪಿ ಉಪ ಚುನಾವಣೆಗೆ ತಯಾರಿ ನಡೆಸಿದೆ. ಮಾಜಿ ಶಾಸಕ ಅಮೃತ ದೇಸಾಯಿ, ಸೀಮಾ

Live Cricket

error: Content is protected !!