ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೇಸ್ ಪಕ್ಷ ಅಜಯ ರಾಯ್ ರನ್ನು ಕಣಕ್ಕಿಳಿಸಿದೆ. 5 ಬಾರಿ ಶಾಸಕರಾಗಿರುವ ಅಜಯ ರಾಯ್, ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.
ಕೋಲಾಸ್ಲ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ 1996 ರಿಂದ 2007 ರ ವರೆಗೆ ಮೂರು ಸಲ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ಬಿಜೆಪಿಗೆ ರಾಜೀನಾಮೆ ನೀಡಿದ್ದರು. ಅಲ್ಲದೆ ಅದೇ ಕ್ಷೇತ್ರದಿಂದ ಒಮ್ಮೆ ಪಕ್ಷೇತರರಾಗಿ ಗೆದ್ದಿದ್ದರು. 2009 ರಲ್ಲಿ ವಾರಣಾಸಿಯಿಂದ ಸಮಾಜವಾದಿ ಪಕ್ಷದ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. 2012 ರಲ್ಲಿ ಕಾಂಗ್ರೇಸ್ ಪಕ್ಷದಿಂದ ಶಾಸಕರಾಗಿ 5 ನೇ ಬಾರಿಗೆ ಆಯ್ಕೆಯಾಗಿದ್ದರು.
ಈಗಾಗಲೇ 2014 ಮತ್ತು 2019 ರಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿಯಾಗಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಿದ್ದರು. ಈಗ ಮತ್ತೆ ವಾರಣಾಸಿಯಿಂದ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.
Author: Karnataka Files
Post Views: 5





