ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕ್ಷೀಪ್ರ ಬೆಳವಣಿಗೆಗಳು ನಡೆದಿವೆ. ಜಿಲ್ಲೆಯ ರಾಜಕಾರಣ ಗರಿಗೆದರಿದೆ. ಈಗ ಎಲ್ಲರ ದ್ರಷ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿಯವರ ಮೇಲೆ ನೆಟ್ಟಿದೆ. ನಾಳೆ ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಹಮ್ಮಿಕೊಂಡಿರುವ ಸ್ವಾಮೀಜಿಗಳ ಚಿಂತನ ಮಂಥನ ಸಭೆ ಭಾರಿ ಕುತೂಹಲ ಮೂಡಿಸಿದೆ.
ಧಾರವಾಡ ಮುರುಘಾಮಠದ ಶ್ರೀಗಳ ಅಧ್ಯಕ್ಷತೆಯಲ್ಲಿ ಸ್ವಾಮೀಜಿಗಳ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ವಿವಿಧ ಮಠಗಳ ಸುಮಾರು 150 ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ಸಾಮಾಜಿಕ, ಧಾರ್ಮಿಕ ಚಿಂತನೆಗಳ ಜೊತೆಗೆ ರಾಜಕೀಯದ ಬಗ್ಗೆಯೂ ಪ್ರಮುಖ ಚರ್ಚೆ ನಡೆಯುವ ಸಾಧ್ಯತೆ ಇದ್ದು, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ದಿಂಗಾಲೇಶ್ವರ ಶ್ರೀಗಳು ರಣಕಹಳೆ ಮೊಳಗಿಸಲಿದ್ದಾರೆ ಎನ್ನಲಾಗಿದೆ.
ಈಗಾಗಲೇ ಭಕ್ತವೃಂದಕ್ಕೂ ಸಂದೇಶ ಕಳಿಸಿರುವ ದಿಂಗಾಲೇಶ್ವರ ಶ್ರೀಗಳು, ಸಭೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ಭಕ್ತರಲ್ಲಿಯೂ ಭಾರಿ ಕುತೂಹಲ ಮೂಡಿಸಿದೆ.
Author: Karnataka Files
Post Views: 1





