ಲೋಕಸಭಾ ಕದನಕ್ಕೆ ದಿನಾಂಕ ನಿಗದಿಯಾಗುತ್ತಿದ್ದಂತೆ, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಕುತೂಹಲಕಾರಿ ಬೆಳವಣಿಗೆಗಳು ನಡೆದಿವೆ. ಇಂದು ಹುಬ್ಬಳ್ಳಿಯಲ್ಲಿ ನಡೆದ ಫಕೀರ ದಿಂಗಾಲೇಶ್ವರ ಸ್ವಾಮೀಜಿಯವರ ಪತ್ರಿಕಾಗೋಷ್ಟಿ ಸಾಕಷ್ಟು ವಿಚಾರಗಳನ್ನು ಹೊರಗೆಡುವಿದೆ.
ನಾಳೆ ಬೆಳಿಗ್ಗೆ 9-30 ಕ್ಕೆ ಹುಬ್ಬಳ್ಳಿಯ ಮೂರುಸಾವಿರ ಮಠದ ಶಿವಾನುಭವ ಮಂಟಪದಲ್ಲಿ ದಿಂಗಾಲೇಶ್ವರ ಸ್ವಾಮೀಜಿಯವರು ನಾಡಿನ ಮಠಾಧೀಶರ ಸಭೆ ನಡೆಸಲಿದ್ದಾರೆ. ಈ ಮಠಾಧೀಶರ ಸಭೆ ರಾಜ್ಯ ರಾಜಕಾರಣದಲ್ಲಿ ಗಮನ ಸೆಳೆದಿದೆ. ಈ ಸಭೆಗೆ ನಾಡಿನ ಸ್ವಾಮೀಜಿಗಳನ್ನು ಆಹ್ವಾನ ನೀಡಲಾಗಿದೆ ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದ್ದಾರೆ. ಸಭೆಯಲ್ಲಿ ವರ್ತಮಾನದಲ್ಲಿ ನಡೆದಿರುವ ಸಂಗತಿಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಒತ್ತಿ ಒತ್ತಿ ಹೇಳಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಸಭೆಯಲ್ಲಿ ವರ್ತಮಾನದಲ್ಲಿ ಎದುರಾಗಿರುವ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದ ಅವರು. ಸಾಮಾಜಿಕ, ಧಾರ್ಮಿಕ, ರಾಜಕೀಯ ಸಮಸ್ಯೆಗಳ ಬಗ್ಗೆ ಪ್ರಮುಖ ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದು, ನಾಳಿನ ಮಠಾಧೀಶರ ಸಭೆ ಕುತೂಹಲ ಮೂಡಿಸಿದೆ.





