ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಇಂದು ತಡಕೋಡ ಗ್ರಾಮದಲ್ಲಿ ನಡೆದ ಬಹಿರಂಗ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದರು.
ಜಿಲ್ಲಾ ಪಂಚಾಯತ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಸಭೆ ನಡೆಸುತ್ತಿರುವ ಜೋಶಿ ಇಂದು ಗರಗ ಜಿಲ್ಲಾ ಪಂಚಾಯತ ವ್ಯಾಪ್ತಿಯ ತಡಕೋಡ ಗ್ರಾಮದಲ್ಲಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಬೆಂಬಲಿಗರು ಜೋಶಿಯವರಿಗೆ ಬಸವೇಶ್ವರರ ಫೋಟೋ ಕೊಟ್ಟು ಸನ್ಮಾನ ಮಾಡಿದ್ದು ಎಲ್ಲರ ಗಮನ ಸೆಳೆಯಿತು.
ಇತ್ತೀಚಿಗೆ ದಿಂಗಾಲೇಶ್ವರ ಶ್ರೀಗಳು ಜೋಶಿಯವರು ಲಿಂಗಾಯತ ನಾಯಕರನ್ನು ರಾಜಕೀಯವಾಗಿ ತುಳಿದಿದ್ದಾರೆ ಎಂದು ನೀಡಿದ ಹೇಳಿಕೆ ಬೆನ್ನಲ್ಲೇ ಅವರಿಗೆ ಬಸವೇಶ್ವರರ ಫೋಟೋ ಕೊಟ್ಟು ಸನ್ಮಾನಿಸಿದ್ದು, ರಾಜಕೀಯ ಚರ್ಚೆಗೆ ಎಡೆಮಾಡಿಕೊಟ್ಟಿದೆ
Author: Karnataka Files
Post Views: 8





