ಧಾರವಾಡ ಲೋಕಸಭಾ ಕ್ಷೇತ್ರವನ್ನು ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಧಾರವಾಡ ಜಿಲ್ಲೆಯ ಕಾಂಗ್ರೇಸ್ ನಾಯಕರು ಇಂದು ಬೆಂಗಳೂರಿನಲ್ಲಿ ಶಪಥ ಮಾಡಿದರು.
ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರು, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ, ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಭೆ ಸೇರಿದ ಧಾರವಾಡ ಜಿಲ್ಲೆಯ ಕಾಂಗ್ರೇಸ್ ಶಾಸಕರು, ಗೆಲುವಿಗೆ ರಣತಂತ್ರ ಹೆಣೆದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ ಕುಲಕರ್ಣಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್ ಎಚ್ ಕೋನರೆಡ್ಡಿ, ಅಭ್ಯರ್ಥಿ ವಿನೋದ ಅಸೂಟಿ ಸಭೆ ನಡೆಸಿದರು. ಒಗ್ಗಟ್ಟು ಪ್ರದರ್ಶನ ಮಾಡಿದ ನಾಯಕರು ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿಷ್ಟೆಯನ್ನಾಗಿ ಸ್ವೀಕರಿಸಿದರು.
ರಾಜ್ಯ ಸರ್ಕಾರದ ಪಂಚ ಗ್ಯಾರೆಂಟಿಗಳನ್ನು ಮನೆ ಮನೆಗೆ ಮುಟ್ಟಿಸುವ ಮೂಲಕ, ರಾಷ್ಟ್ರಮಟ್ಟದಲ್ಲಿ ಭರವಸೆ ನೀಡಿದ ಸಮಾನ ನ್ಯಾಯ, ನಾರಿ ನ್ಯಾಯ, ಸೇರಿದಂತೆ ಪಕ್ಷದ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಮನವರಿಕೆ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.
ಒಟ್ಟಾರೆ ಬೆಂಗಳೂರಿನಲ್ಲಿ ನಡೆದ ಧಾರವಾಡ ಜಿಲ್ಲೆಯ ಕಾಂಗ್ರೇಸ್ ನಾಯಕರ ಸಭೆ ಹೊಸ ಸಂದೇಶ ನೀಡಿತು. ನಾವೆಲ್ಲಾ ಒಂದಾಗಿದ್ದೇವೆ ಅನ್ನೋ ಸಂದೇಶ ರವಾನಿಸಿತು.





