Download Our App

Follow us

Home » ರಾಜಕೀಯ » ಧಾರವಾಡ ಲೋಕಸಭಾ ಕ್ಷೇತ್ರ. ಪಕ್ಷೇತರ ಅಭ್ಯರ್ಥಿಯಾಗಿ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ. 16 ರಂದು ನಾಮಪತ್ರ ಸಲ್ಲಿಕೆ ಸಾಧ್ಯತೆ

ಧಾರವಾಡ ಲೋಕಸಭಾ ಕ್ಷೇತ್ರ. ಪಕ್ಷೇತರ ಅಭ್ಯರ್ಥಿಯಾಗಿ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ. 16 ರಂದು ನಾಮಪತ್ರ ಸಲ್ಲಿಕೆ ಸಾಧ್ಯತೆ

ಕರ್ನಾಟಕದ ರಾಜಕಾರಣದಲ್ಲಿ ಕಳೆದ ಒಂದು ತಿಂಗಳಿನಿಂದ ಚರ್ಚೆಯಲ್ಲಿರುವ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪ್ರಮುಖ ಮಠವೊಂದರ ಸ್ವಾಮೀಜಿ ಸ್ಪರ್ಧಿಸಲಿದ್ದಾರೆ. 

ಲಿಂಗಾಯತ ನಾಯಕರನ್ನು ತುಳಿಯುತ್ತ ಬರಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿ ವಿರುದ್ಧ ಸಮರ ಸಾರಿರುವ ಶಿರಹಟ್ಟಿ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕಡೆಗೂ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. 

ವಿವಿಧ ಮಠದ ಸ್ವಾಮೀಜಿಗಳು, ಭಕ್ತರು ಹಾಗೂ ಸಮಾಜದ ಪ್ರಮುಖರೊಡನೆ ಸುಧೀರ್ಘ ಚರ್ಚೆ ನಡೆಸಿರುವ ದಿಂಗಾಲೇಶ್ವರ ಶ್ರೀಗಳು 16 ರಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. 

ಕೇಂದ್ರ ಸಚಿವ ಪ್ರಲ್ಲಾದ ಜೋಶಿ ವಿರುದ್ಧ ದಿಂಗಾಲೇಶ್ವರ ಶ್ರೀಗಳು ಸ್ಪರ್ಧಿಸುವದು ಅಂತಿಮಗೊಂಡಿದ್ದು ಕುತೂಹಲ ಮೂಡಿಸಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಲಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನ್ಯೂ ಕಮಿಷನರ್ ಸೈಲೆಂಟ್ ಸ್ಟ್ರೋಕ್ : ಅವಳಿ ನಗರದಲ್ಲಿ ಅಸಲಿ ಖಾಕಿ ಖದರ್ ಶುರು….

ಹುಬ್ಬಳ್ಳಿ-ಧಾರವಾಡ ನಗರ ವ್ಯಾಪ್ತಿಯಲ್ಲಿ ಚಾಕು ಇರಿತ ಪ್ರಕರಣಗಳನ್ನು ಹತ್ತಿಕ್ಕಲು ಹೊಸದಾಗಿ ಬಂದಿರುವ ಪೊಲೀಸ್ ಕಮಿಷನರ್ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಅವಳಿ ನಗರದಲ್ಲಿ ಚಾಕು, ತಲ್ವಾರ್ ಸೇರಿದಂತೆ ಮಾರಕಾಸ್ತ್ರಗಳನ್ನು

Live Cricket

error: Content is protected !!