ಬರ್ಬರವಾಗಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭೇಟಿ ನೀಡಿದರು.
ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವೆ, ನಡೆದ ಘಟನೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು ಹಂತಕನಿಗೆ ಕಠಿಣ ಶಿಕ್ಷೆ ಸಿಗುವಂತೆ ಸರ್ಕಾರ ನೋಡಿಕೊಳ್ಳುತ್ತದೆ ಎಂದು ಭರವಸೆ ನೀಡಿದರು.
ನೇಹಾ ಪಾಲಕರಿಗೆ ಧೈರ್ಯ ತುಂಬಿದ ಸಚಿವರು, ನೇಹಾ ಸಾವಿಗೆ ಕಂಬನಿ ಮಿಡಿದರು. ಈ ಸಂದರ್ಭದಲ್ಲಿ ಕಾಂಗ್ರೇಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಉಪಸ್ಥಿತರಿದ್ದರು
Author: Karnataka Files
Post Views: 1





