ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈಲಾರಿ ಹೋಟೆಲ್ ನಲ್ಲಿ ಇಂದು ತಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ.
ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು ಎಂದು ಹೇಳಿರುವ ಸಿದ್ದರಾಮಯ್ಯ, ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ ಎಂದು ತಿಳಿಸಿದ್ದಾರೆ.
ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದೈಹಿಕವಾಗಿ ದೂರವಿದ್ದಾಗಲೂ ಮೈಸೂರಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ. ಈ ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು ಎಂದು ಹೇಳಿದ್ದಾರೆ.
Author: Karnataka Files
Post Views: 1





