ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿ ನಾಗೇಂದ್ರರಿಗೆ ವಿಶೇಷ ನ್ಯಾಯಾಲಯ 6 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿದೆ.
ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ನಾಗೇಂದ್ರರನ್ನು ಸುಮಾರು ಗಂಟೆಗಳ ವಿಚಾರಣೆ ಬಳಿಕ ನಿನ್ನೆ ತಡರಾತ್ರಿ ಅವರನ್ನು ಬಂಧಿಸಿತ್ತು.
ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾಗಿದ್ದಾಗ ಎಸ್‌ಟಿ ಕಲ್ಯಾಣ ಮಂಡಳಿಯಲ್ಲಿ 187 ಕೋಟಿ ರೂ.ಗಳ ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾದ ಬೆನ್ನಲ್ಲೇ ನಾಗೇಂದ್ರ ಬಂಧನವಾಗಿದೆ.
ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ, ಏಕೆ ಬಂಧಿಸಲಾಗಿದೆ ಎಂದು ತಿಳಿದಿಲ್ಲ ಎಂದು ನಾಗೇಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Author: Karnataka Files
Post Views: 1





