ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.
ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದಿರುವ ಅವರು, ಕಾಂಗ್ರೇಸ್ ಸರ್ಕಾರ ಮಾತು ಕೊಟ್ಟಂತೆ ನಡೆದುಕೊಂಡಿದೆ ಎಂದಿದ್ದಾರೆ. ಆದರೆ ಸಿ ಮತ್ತು ಡಿ ದರ್ಜೆಯ ಜೊತೆ ಬಿ ದರ್ಜೆಯ ಉದ್ಯೋಗದಲ್ಲಿಯೂ ಉದ್ಯೋಗ ಮೀಸಲಾತಿ ಕೊಡುವ ಕಾಯ್ದೆ ತರಬೇಕಿತ್ತು ಎಂದು ಜನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Author: Karnataka Files
Post Views: 7





