ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪಕ್ಕದ ಮನೆಯ ಗೋಡೆ ಕುಸಿದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ವೆಂಕಟಾಪುರದಲ್ಲಿ ಸಂಭವಿಸಿದೆ.

ವೆಂಕಟಾಪುರ ಗ್ರಾಮದ ಯಲ್ಲಪ್ಲ ಎಂಬಾತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆತನ ಹೆಂಡತಿಗೂ ಗಂಭೀರ ಗಾಯಗಳಾಗಿದ್ದು, ಧಾರವಾಡ ಜಿಲ್ಲಾಸ್ಪತ್ರೆಗೆ ಧಾಖಲಿಸಲಾಗಿದೆ.

ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಹಾಗೂ ಗರಗ ವೃತ್ತದ ಸಿ ಪಿ ಐ ಸಮೀರ ಮುಲ್ಲಾ ಧಾವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

Author: Karnataka Files
Post Views: 1





