ನವಲಗುಂದ ಹೊರವಲಯದಲ್ಲಿ ಭೀಕರ ಅಪಘಾತ ನಡೆದಿದ್ದು, ನವಲಗುಂದದಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ಪೊಲೀಸ ಪೇದೆ ಬೈಕ್ ಗೆ ಕ್ಯಾಂಟರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ ಪೇದೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಧಾರವಾಡದ ಪೊಲೀಸ ತರಬೇತಿ ಕೇಂದ್ರದ ಪೊಲೀಸ್ ಪೇದೆ ಶರಣಗೌಡ ಪಾಟೀಲಗೆ ಗಂಭೀರಗಾಯವಾಗಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ನವಲಗುಂದ ಪೊಲೀಸ್ ಠಾಣೆ ಸಿಬ್ಬಂದಿ ಗಾಯಾಳು ಶರಣಗೌಡರಿಗೆ ಎಸ್ ಡಿ ಎಮ್ ಆಸ್ಪತ್ರೆಗೆ ಸಾಗಿಸಿದ್ದಾರೆ.
ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಗೋಪಾಲ ಬ್ಯಾಕೋಡ ಅವರು ಆಸ್ಪತ್ರೆಗೆ ಧಾವಿಸಿ, ಗಾಯಾಳು ಪೇದೆಯ ಆರೋಗ್ಯ ವಿಚಾರಿಸಿದ್ದಾರೆ.
Author: Karnataka Files
Post Views: 1





