ರಾಜ್ಯದಲ್ಲಿ ಇನ್ಮುಂದೆ ವೈದ್ಯರು ಕನ್ನಡದಲ್ಲಿ ಔಷಧಿ ಚೀಟಿಯನ್ನು ಬರೆಯಲು ಆದೇಶ ನೀಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದ ಬೆನ್ನಲ್ಲೆ,
ಬೆಂಗಳೂರಿನ ಕೆ.ವಿ.ಡೆಂಡಲ್ ಕ್ಲಿನಿಕ್ ಆಸ್ಪತ್ರೆಯ ವೈದ್ಯ ಹರಿಪ್ರಸಾದ್ ಸಿ.ಎಸ್. ಎಂಬುವರು ಔಷಧಿ ಚೀಟಿಯನ್ನು ಕನ್ನಡದಲ್ಲೇ ಬರೆದುಕೊಟ್ಟು ಮಾದರಿಯಾಗಿದ್ದಾರೆ.
ರಾಯಚೂರಿನಲ್ಲಿಯೂ ವೈದ್ಯರು ಕನ್ನಡದಲ್ಲಿ ಔಷಧಿ ಚೀಟಿಗಳನ್ನು ಬರೆಯಲು ಆರಂಭ ಮಾಡಿರುವದು ಒಳ್ಳೆಯ ಬೆಳವಣಿಗೆ ಎಂದ ಅಧ್ಯಕ್ಷ ಪುರಷೋತ್ತಮ ಬಿಳಿಮಲೆ, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಕನ್ನಡದಲ್ಲಿಯೇ ಬರೆಯುವಂತೆ ಆಗ್ರಹಿಸಲಾಗಿದೆ ಎಂದರು.
ಆರೋಗ್ಯ ಸಚಿವ ದಿನೇಶ ಗುಂಡುರಾವ ಅವರಿಗೆ ಪ್ರಾಧಿಕಾರದ ವತಿಯಿಂದ ಮನವಿ ಮಾಡಲಾಗಿದ್ದು, ಅಧಿಕೃತ ಆದೇಶ ಹೊರಡಿಸುವಂತೆ ಆಗ್ರಹಿಸಲಾಗಿದೆ ಎಂದರು
Author: Karnataka Files
Post Views: 4





