ಧಾರವಾಡದ ಹೊಯ್ಸಳ ನಗರ ಬಳಿ ಮಧ್ಯರಾತ್ರಿ 12-30 ರ ಸುಮಾರಿಗೆ ಬೈಕ್ ವೊಂದಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.
ಈ ದುರ್ಘಟನೆಯಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮತ್ತೊರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಬೈಕ್ ಸವಾರರು ದಾಂಡೇಲಿ ಕಡೆಗೆ ಹೊರಟಿದ್ದರು ಎನ್ನಲಾಗಿದ್ದು, ರಾಣೇಬೆನ್ನೂರ ಮೂಲದವರು ಎನ್ನಲಾಗಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಗಾಯಗೊಂಡವನನ್ನು ಜಿಲ್ಲಾಸ್ಪತ್ರೆಗೆ ಧಾಖಲಿಸಲಾಗಿದೆ.
ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನದ ಶೋಧ ಕಾರ್ಯ ನಡೆಯುತ್ತಿದೆ.
Author: Karnataka Files
Post Views: 6





