ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮುಸ್ಲಿಮ್ ಸಮುದಾಯಕ್ಕೆ ಇದ್ದ ಶೇಖಡಾ 4 ರಷ್ಟು ಮೀಸಲಾತಿಯನ್ನು ತೆಗೆದು ಹಾಕಿತ್ತು. ಸದ್ಯ ಕಾಂಗ್ರೇಸ್ ಸರ್ಕಾರ ಅಧಿಕಾರದಲ್ಲಿದ್ದು, ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿಯನ್ನು ಮುಂದುವರೆಸುವಂತೆ ಕರ್ನಾಟಕ ಮುಸ್ಲಿಂ ಯುನಿಟಿ ಸದಸ್ಯ ಸಲೀಮ್ ಸಂಗನಮುಲ್ಲಾ ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಚುನಾವಣೆಗೂ ಮುನ್ನ ಕಾಂಗ್ರೇಸ್ ಮಾತುಕೊಟ್ಟಂತೆ ನಡೆದುಕೊಳ್ಳಬೇಕು ಎಂದಿರುವ ಸಲೀಮ್, ಬೆಳಗಾವಿ ಅಧಿವೇಶನದ ಒಳಗೆ ಮೀಸಲಾತಿ ಕಲ್ಪಿಸದೆ ಇದ್ದರೆ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವದಾಗಿ ಎಚ್ಚರಿಸಿದ್ದಾರೆ.
Author: Karnataka Files
Post Views: 1





