Download Our App

Follow us

Home » ಕಾನೂನು » ರೇಣುಕಾಸ್ವಾಮಿ ಕೊಲೆ ಪ್ರಕರಣ. ದರ್ಶನ್, ಪವಿತ್ರಾಗೆ ಜಾಮೀನು ಮಂಜೂರು

ರೇಣುಕಾಸ್ವಾಮಿ ಕೊಲೆ ಪ್ರಕರಣ. ದರ್ಶನ್, ಪವಿತ್ರಾಗೆ ಜಾಮೀನು ಮಂಜೂರು

ಕೊಲೆ ಪ್ರಕರಣದಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್, ಹಾಗೂ ಪವಿತ್ರಾಗೌಡಗೆ ಕಡೆಗೂ ಹೈಕೋರ್ಟ ಜಾಮೀನು ಮಂಜೂರು ಮಾಡಿದ್ದಾರೆ. 

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ, ಆರ್ ನಾಗರಾಜು, ಎಂ ಲಕ್ಷ್ಮಣ್, ಅನು ಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ ಜಗ್ಗ, ಪ್ರದೋಷ್ ರಾವ್ ಅವರಿಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. 

ವಾದ-ಪ್ರತಿವಾದ ಆಲಿಸಿದ ಡಿಸೆಂಬರ್ ಬಳಿಕ 9ರಂದು ಕಾಯ್ದಿರಿಸಿರುವ ಆದೇಶವನ್ನು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಇಂದು ಪ್ರಕಟಿಸಿದೆ. 

ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಜೂನ್ 11 ರಂದು ದರ್ಶನ್ ಅವರನ್ನು ಬಂಧಿಸಿದ ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಜೂನ್ 22 ರಿಂದ ದರ್ಶನ್ ಹಾಗೂ ಇತರ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. 

ದರ್ಶನ್‌ ಅಕ್ಟೋಬರ್ 30 ರಂದು ವೈದ್ಯಕೀಯ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಅಂದಿನಿಂದ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!