ಕರ್ನಾಟಕದ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಅವರ ನಿಧನ, ತೀವ್ರ ದುಃಖ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ.
ಶ್ರೀಮತಿ, ತುಳಸಿಗೌಡ ಅವರು ತಮ್ಮ ಇಡೀ ಬದುಕನ್ನು ಪ್ರಕೃತಿ ಪೋಷಣೆಗಾಗಿ ಮುಡಿಪಾಗಿಟ್ಟು, ಸಾವಿರಾರು ಗಿಡಗಳನ್ನು ನೆಟ್ಟು, ಬೆಳೆಸಿ ನಮ್ಮ ಪರಿಸರವನ್ನು ಸಂರಕ್ಷಿಸಿದವರು ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಪರಿಸರ ರಕ್ಷಣೆಗೆ ಸದಾ ಮಾರ್ಗದರ್ಶನ ನೀಡುವ ಬೆಳಕಾಗಿ ಅವರು ಉಳಿಯುತ್ತಾರೆ. ಅವರ ಕೆಲಸಗಳು ನಮ್ಮ ಭೂಗ್ರಹವನ್ನು ರಕ್ಷಿಸಲು ತಲೆಮಾರುಗಳಿಗೆ ಪ್ರೇರಣೆ ನೀಡುತ್ತಿರುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಭಗವಂತ ಧೈರ್ಯ ತುಂಬಲಿ ಎಂದು ಪ್ರಾರ್ಥಿಸಿದ್ದಾರೆ.
Author: Karnataka Files
Post Views: 6





