ಖ್ಯಾತ ನಟ ಶಿವರಾಜಕುಮಾರ ಅವರಿಗೆ ಇಂದು ಶಸ್ತ್ರ ಚಿಕಿತ್ಸೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಶುಭ ಹಾರೈಸಿದ್ದಾರೆ.
ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ.
ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದಾರೆ.
ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ.
ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜಕುಮಾರ್ ಅವರ ಜೊತೆಗಿದ್ದು ಅವರನ್ನು ಕಾಪಾಡಲಿದೆ ಎಂದಿದ್ದಾರೆ.
Author: Karnataka Files
Post Views: 1





