ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಧಾರವಾಡ ಜಿಲ್ಲೆಯಲ್ಲಿ ನಾಳೆಯೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಇಂದು ಹವಾಮಾನ ಇಲಾಖೆಯಿಂದ ಜಿಲ್ಲೆಗೆ ರೆಡ್ ಅಲರ್ಟ್ ಸೂಚಿಸಲಾಗಿತ್ತು. ಮಳೆಯೂ ನಿರಂತರವಾಗಿ ಆಗುತ್ತಿರುವದರಿಂದ ಅನೇಕ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸುರಕ್ಷತಾ ದೃಷ್ಠಿಯಿಂದ ನಾಳೆಯೂ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ರಜೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: Karnataka Files
Post Views: 1





