ರಾಜ್ಯದ ವಿವಿದೆಡೆ ಸತತವಾಗಿ ಮಳೆ ಸುರಿಯುತ್ತಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಮತ್ತು ಆರೆಂಜ ಅಲರ್ಟ್ ಘೋಷಿಸಲಾಗಿದೆ.
ಗಡಿನಾಡು ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಬೀಳುತ್ತಿದ್ದು, ನಾಳೆ ಬೆಳಗಾವಿ ಹಾಗೂ ಖಾನಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಧಾರವಾಡ ಜಿಲ್ಲೆಯಲ್ಲಿಯೂ ಸಂಜೆಯಿಂದ ಸತತವಾಗಿ ಮಳೆ ಸುರಿಯುತ್ತಿದೆ, ಜನಜೀವನ ಅಸ್ತವ್ಯಸ್ತಗೊಂಡಿದೆ.
Author: Karnataka Files
Views: 39





