ಮೈಸೂರಿನ ನಜರ್ ಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ನಗರ (ಇಟ್ಟಿಗೆಗುಡ್) ದಸರಾ ವಸ್ತು ಪ್ರದರ್ಶನ ಮೈದಾನದ ಬಳಿ ಒಂಬತ್ತು ವರ್ಷದ ಬಾಲಕಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಕೊಲೆಯಾಗಿ ಪತ್ತೆಯಾಗಿದ್ದಾಳೆ.
ಪೊಲೀಸರು ಇದನ್ನು ಅಪಹರಣ, ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಎಂದು ದೂರು ಧಾಖಲಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ತಿಕ ಎಂಬಾತನನ್ನು ಕೊಳ್ಳೇಗಾಲದಲ್ಲಿ ಬಂಧಿಸಿದ್ದಾರೆ.
ಪೂಲೀಸರು ಆತನನ್ನು ಬಂಧಿಸಲು ಹೋದಾಗ ತಪ್ಪಿಸಿಕೊಂಡು ಹೋಗುತ್ತಿದ್ದ ಎನ್ನಲಾಗಿದೆ. ಕಾರ್ತಿಕನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.
ಮೃತ ಬಾಲಕಿ ಪಾಲಕರು ಕಲಬುರಗಿ ಜಿಲ್ಲೆಯವರಾಗಿದ್ದು, ಮೈಸೂರು ದಸರಾ ಸಂದರ್ಭದಲ್ಲಿ ದುಡಿಯಲು ಮೈಸೂರಿಗೆ ಬಂದಿದ್ದರು ಎನ್ನಲಾಗಿದೆ.
Author: Karnataka Files
Post Views: 67





