ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರವರು ಗುಣಮುಖರಾಗಿ ಇಂದು ಮನೆಗೆ ಮರಳಿದ್ದಾರೆ.
ವೈದ್ಯರ ಸೂಚನೆಯಂತೆ ದೇವೇಗೌಡರಿಗೆ ಇನ್ನೂ 15 ದಿನ ವಿಶ್ರಾಂತಿ ಅಗತ್ಯವಿದೆ. ಹೀಗಾಗಿ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಭೇಟಿ ಮಾಡಲು ಅವರ ನಿವಾಸಕ್ಕೆ ಬರಬಾರದು ಎಂದು ಜೆಡಿಎಸ್ ನಾಯಕರು ವಿನಂತಿಸಿದ್ದಾರೆ.
ವಿಶ್ರಾಂತಿ ಬಳಿಕ, ಪಕ್ಷದ ಕೇಂದ್ರ ಕಚೇರಿ ಜೆ.ಪಿ. ಭವನಕ್ಕೆ ದೇವೇಗೌಡರು ಖುದ್ದು ಆಗಮಿಸಿ ಎಲ್ಲರನ್ನೂ ಭೇಟಿಯಾಗಲಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.
Author: Karnataka Files
Post Views: 2





