Download Our App

Follow us

Home » ಭಾರತ » ಆರು ವರ್ಷಗಳಲ್ಲಿ ಧಾಖಲೆಯ 22 ಸಾವಿರ ಪ್ರಕರಣ ವಿಲೇವಾರಿ : ದೇಶದ ಮೊದಲ ಹೈಕೋರ್ಟ್ ನ್ಯಾಯಮೂರ್ತಿ ನ್ಯಾ. ನಾಗಪ್ರಸನ್ನ

ಆರು ವರ್ಷಗಳಲ್ಲಿ ಧಾಖಲೆಯ 22 ಸಾವಿರ ಪ್ರಕರಣ ವಿಲೇವಾರಿ : ದೇಶದ ಮೊದಲ ಹೈಕೋರ್ಟ್ ನ್ಯಾಯಮೂರ್ತಿ ನ್ಯಾ. ನಾಗಪ್ರಸನ್ನ

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಆರು ವರ್ಷಗಳ ಅವಧಿಯಲ್ಲಿ 22 ಸಾವಿರ ವಿವಿಧ ನಮೂನೆಗಳ ಪ್ರಕರಣಗಳನ್ನು ವಿಲೇವಾರಿ ಮಾಡಿ ಧಾಖಲೆ ಮಾಡಿದ್ದಾರೆ.

ಅವರು ಈ ಸಾಧನೆ ಮಾಡಿದ ದೇಶದ ಮೊದಲ ನ್ಯಾಯಮೂರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ನ್ಯಾ.ನಾಗಪ್ರಸನ್ನ ಅವರು ಬುಧವಾರ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಆರು ವರ್ಷಗಳನ್ನು ಪೂರೈಸಿದ್ದಾರೆ.

ನಾಗಪ್ರಸನ್ನ ಅವರು, ಬಾಕಿ ಇರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಅವರು ಒಂದೇ ದಿನದಲ್ಲಿ 608 ಪ್ರಕರಣಗಳನ್ನು ವಿಲೇವಾರಿ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ.

ಇದು ಕರ್ನಾಟಕದಲ್ಲಿ ಒಂದು ದಿನದಲ್ಲಿ ಅತ್ಯಧಿಕ ಪ್ರಕರಣಗಳ ವಿಲೇವಾರಿಯಾಗಿದೆ. 

ಅವರು 2019ರ ನವೆಂಬರ್ 26 ರಂದು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು, ತದನಂತರ 2021ರ ಸೆಪ್ಟೆಂಬರ್ 8 ರಂದು ಕಾಯಂ ನ್ಯಾಯಮೂರ್ತಿಯಾದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!