Download Our App

Follow us

Home » ಕಾನೂನು » ಸದನದಲ್ಲಿ ಸದ್ದು ಮಾಡಿದ ಸಿಜೇರಿಯನ್ ಹೆರಿಗೆ

ಸದನದಲ್ಲಿ ಸದ್ದು ಮಾಡಿದ ಸಿಜೇರಿಯನ್ ಹೆರಿಗೆ

ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ತಿಳಿಸಿದ್ದಾರೆ.

ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿರುವುದಿಲ್ಲ ಹಾಗೂ ಜಿಲ್ಲಾ, ಕೆ.ಪಿ.ಎಂ.ಇ. ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ಈ ಬಗ್ಗೆ ಯಾವುದೇ ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗಿರುವುದಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ದೂರುಗಳು ಬಂದಲ್ಲಿ ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆಪಿಎಂಇ ಅಧಿನಿಯಮದ ಸೆಕ್ಷನ್ 15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದರು. 

ಗರ್ಭಿಣಿಯರಿಗೆ ತಪಾಸಣೆ ಮಾಡುವ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಅನುಸರಿಬೇಕಾದ ನೀತಿ ನಿಯಮಗಳಿದ್ದು ,ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ.ಪಿ.ಎಂ.ಇ, ಅಧಿನಿಯಮದ ಸೆಕ್ಷನ್15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುತ್ತದೆ ಎಂಬ ಎಚ್ಚರಿಕೆ ನೀಡಿದರು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರ ಉತ್ತರಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಶಾಕೀರ ಸನದಿ ಮುಂದುವರಿಕೆ

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಶಾಕೀರ ಸನದಿಯವರನ್ನು ಮುಂದುವರೆಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಹುಡಾ ಜೊತೆ ಗದಗ, ಹಾವೇರಿ, ಬೆಳಗಾವಿ

Live Cricket

error: Content is protected !!