Download Our App

Follow us

Home » ರಾಜಕೀಯ » ಕೊಟ್ಟ ಮಾತು….. ಮಣ್ಣು ಪಾಲು

ಕೊಟ್ಟ ಮಾತು….. ಮಣ್ಣು ಪಾಲು

ಧಾರವಾಡ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಂಗಳದಲ್ಲಿ ಬಿರುಕು ಕಾಣಿಸಿಕೊಂಡಿದೆ. ಕೊಟ್ಟ ಮಾತು ಮಣ್ಣು ಪಾಲಾಗಿದೆ. 

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜೋಡೆತ್ತುಗಳಾಗಿ ಕಾಣಿಸಿಕೊಂಡಿದ್ದ ಇಬ್ಬರು ನಾಯಕರ ನಡುವೆ ಜೋಡಿಸಲಾಗದ ಬಿರುಕು ಕಾಣಿಸಿಕೊಂಡಿದೆ. 

ಜೆಡಿಎಸ್ ತೊರೆದು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡು ಟಿಕೇಟ್ ಗಿಟ್ಟಿಸಿ ಶಾಸಕರಾಗಿ ಆಯ್ಕೆಯಾದ ಹಾಲಿ ಶಾಸಕ ಎನ್ ಎಚ್ ಕೋನರೆಡ್ಡಿ ಹಾಗೂ ಕ್ಷೇತ್ರ ಬಿಟ್ಟುಕೊಟ್ಟ ವಿನೋದ ಅಸೂಟಿಯವರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಮಾತು ಕಾಂಗ್ರೇಸ್ ಕಾರ್ಯಕರ್ತರಲ್ಲಿ ನಿತ್ಯ ಚರ್ಚೆಗೆ ಕಾರಣವಾಗಿದೆ. 

ಇದು 2028 ರ ಚುನಾವಣೆ ಮೇಲೆ ದೊಡ್ಡ ಪರಿಣಾಮವಾಗುವ ಸಾಧ್ಯತೆ ಗೋಚರವಾಗುತ್ತಿದೆ. ಇಬ್ಬರು ನಾಯಕರು ತಮ್ಮದೇ ಆದ ಬೆಂಬಲಿಗರ ಪಡೆಯನ್ನು ಹೊಂದಿದ್ದಾರೆ. ಬಂಡಾಯದ ನಾಡು ನವಲಗುಂದ ಕ್ಷೇತ್ರದಲ್ಲಿ ಕಾಂಗ್ರೇಸ್ಸಿನ ಒಂದು ಗುಂಪನ್ನು ಹೊಸೆದು ಹಾಕುವ ಮಟ್ಟಿಗೆ ಪರಿಸ್ಥಿತಿ ಬಂದು ನಿಂತಿದ್ದು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ.

ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ಹೋದರೆ ಕಾಂಗ್ರೇಸ್ ಪಕ್ಷಕ್ಕೆ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡ ಹೊಡೆತ ಬೀಳುವದು ಖಾತ್ರಿಯಾಗಿದೆ. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!