ಮಹಾರಾಷ್ಟ್ರದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ನ ಐವರು ಸದಸ್ಯರ ಆಯ್ಕೆಯಾಗಿದ್ದಾರೆ.
ಮಹಾರಾಷ್ಟ್ರದ ಕೋಲ್ಹಾಪುರ ಜಿಲ್ಲೆಯ ಗಡಹಿಂಗ್ಲಜ್ ಹಾಗೂ ಪುರ್ಮಾದ ನಗರ ಪಂಚಾಯತ್ ಮತ್ತು ಮುನ್ಸಿಪಲ್ ಕೌನ್ಸಿಲ್ ಚುನಾವಣೆಗಳಲ್ಲಿ ಜೆಡಿಎಸ್ ನಿಂದ ಐವರು ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ನಗರ ಸಂಸ್ಥೆಗಳಿಗೆ ಆಯ್ಕೆಯಾಗಿರುವ ಪಕ್ಷದ ಐವರು ಅಭ್ಯರ್ಥಿಗಳಿಗೆ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿಗಳಾದ ಎಚ್ ಡಿ ದೇವೇಗೌಡರು ಅಭಿನಂದನೆ ಸಲ್ಲಿಸಿದ್ದಾರೆ.
ಮಹಾರಾಷ್ಟ್ರ ರಾಜ್ಯದಲ್ಲಿ ನಮ್ಮ ಪಕ್ಷವನ್ನು ಬಲಪಡಿಸುವಲ್ಲಿ ಶ್ರಮಿಸುತ್ತಿರುವ ಪಕ್ಷದ ಮುಖಂಡರು , ಕಾರ್ಯಕರ್ತರಿಗೆ ಹಾಗೂ ನಮ್ಮ ಅಭ್ಯರ್ಥಿಗಳಿಗೆ ಮತನೀಡಿ ಜಯಶೀಲರನ್ನಾಗಿಸಿದ ಪ್ರತಿಯೊಬ್ಬ ಮತದಾರರಿಗೂ ಧನ್ಯವಾದಗಳು ಎಂದು ದೇವೇಗೌಡರು ಟ್ವೀಟ್ ಮಾಡಿದ್ದಾರೆ.
ಮುಂಬರುವ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ -2026 ಮತ್ತು ಭವಿಷ್ಯದ ಎಲ್ಲಾ ಚುನಾವಣೆಗಳಲ್ಲಿಯೂ ಹೆಚ್ಚು ಸ್ಥಾನಗಳನ್ನು ಪಡೆಯಲು ಈ ಗೆಲುವು ಮುನ್ನುಡಿಯಾಗಲಿದೆ ಎಂದು ದೇವೇಗೌಡರು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.





