ಧಾರವಾಡದ ಮಂದಾರ ಹೋಟೆಲ್ ಬಳಿ ನಿಂತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ರಸ್ತೆಯ ಪಕ್ಕ ನಿಲ್ಲಿಸಿದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ಆರಿಸಿದ್ದಾರೆ.
ಕಾರಿನ ಮುಂಭಾಗದಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ಕಾರಿಗೆ ವ್ಯಾಪಿಸಿ, ಡೀಸೆಲ್ ಟ್ಯಾಂಕ್ ಗೆ ಬೆಂಕಿ ವ್ಯಾಪಿಸುವ ಮೊದಲು ಅಗ್ನಿಶಾಮಕ ದಳದ ಸಿಬ್ಬಂದಿ ಹತೋಟಿಗೆ ತಂದಿದ್ದಾರೆ. ಇದರಿಂದಾಗಿ ಭಾರಿ ದುರಂತವೊಂದು ತಪ್ಪಿದಂತಾಗಿದೆ.
Author: Karnataka Files
Post Views: 920





