Download Our App

Follow us

Home » ಕಾನೂನು » ಮರ್ಯಾದೆಗೇಡು ಹತ್ಯೆ ಪ್ರಕರಣ : ದಲಿತ ಕುಟುಂಬಕ್ಕೆ ಧೈರ್ಯ ತುಂಬಿದ ಶಂಕರ ಪಾಟೀಲ

ಮರ್ಯಾದೆಗೇಡು ಹತ್ಯೆ ಪ್ರಕರಣ : ದಲಿತ ಕುಟುಂಬಕ್ಕೆ ಧೈರ್ಯ ತುಂಬಿದ ಶಂಕರ ಪಾಟೀಲ

ರಾಜ್ಯವನ್ನು ಬೆಚ್ಚಿಬೀಳಿಸಿದ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆಯಲ್ಲಿ ಗಾಯಗೊಂಡು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತರನ್ನು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಇಂದು ಭೇಟಿ ಮಾಡಿದರು.

ಗಾಯಾಳುಗಳ ಆರೋಗ್ಯ ವಿಚಾರಿಸಿದ ಅವರು, ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ​ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ

 

ನಾಗರಿಕ ಸಮಾಜ ತಲೆತಗ್ಗಿಸುವಂತಹ ಅಮಾನವೀಯ ಘಟನೆ ಇದಾಗಿದೆ. ಪ್ರೀತಿ-ವಿಶ್ವಾಸದ ಹೆಸರಿನಲ್ಲಿ ರಕ್ತ ಹರಿಸುವುದು ಸಂಸ್ಕೃತಿಯಲ್ಲ. ಇಂತಹ ಕ್ರೂರ ಘಟನೆಗಳು ಮರುಕಳಿಸದಂತೆ ತಡೆಯಲು ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಳ್ಳಬೇಕು” ಎಂದು ಆಗ್ರಹಿಸಿದರು.

ಇದೇ ವೇಳೆ ವಿಧಾನ ಪರಿಷತ್ ಉಪಾಸಭಾಪತಿ ಬಸವರಾಜ ಹೊರಟ್ಟಿಯವರು ಸಹ ಗಾಯಾಳುಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. 

Karnataka Files
Author: Karnataka Files

Leave a Comment

RELATED LATEST NEWS

error: Content is protected !!